ಬೆಂಗಳೂರು ಮಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿಯೋರ್ವ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ!
ಕುಣಿಗಲ್ ಪಟ್ಟಣದ ಹೊರ ವಲಯ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ದಿನಾಂಕ 28/10/2025 ಮಂಗಳವಾರ ಬೆಳಗಿನ ಜಾವ 2-00 ಗಂಟೆ ಸಮಯದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಅಪರಿಚಿತ ಪಾದಚಾರಿ ವ್ಯಕ್ತಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು 50 ವರ್ಷದ ಆಸುಪಾಸಿನ ವ್ಯಕ್ತಿಯು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು ಮೃತ ವ್ಯಕ್ತಿಯ ಶವವನ್ನ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಈ ಬಗ್ಗೆ ಯಾರಿಗಾದರು ಮಾಹಿತಿ ಇದ್ದಲ್ಲಿ ಅಥವಾ ವಾರಸುದಾರರ ಬಗ್ಗೆ ಯಾರಿಗಾದರೂ ತಿಳಿದು ಬಂದಲ್ಲಿ ಕುಣಿಗಲ್ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08132 – 220229 ಅಥವಾ ಕುಣಿಗಲ್ ಪೊಲೀಸ್ ಉಪ ವಿಭಾಗದ ಕಛೇರಿ ಸಂಖ್ಯೆ 08132 – 220296 ಅಥವಾ ತುಮಕೂರು ಜಿಲ್ಲೆಯ ಪೊಲೀಸ್ ನಿಯಂತ್ರಣ ಕೊಠಡಿಗೆ ಸಂಖ್ಯೆ 0816 – 2278000 ಗೆ ಸಂಪರ್ಕಿಸಲು ಪಟ್ಟಣದ ಪೊಲೀಸ್ ಠಾಣೆಯ ಸಿಪಿಐ ಮಾಧ್ಯನಾಯಕ್ ತಿಳಿಸಿದ್ದಾರೆ @publicnewskunigal