ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಧಿಕಾರಿ ಇಲಾಖೆಯ ವಿಚಾರಣೆ ಬಾಕಿ ಇರಿಸಿ ಅಮಾನತು ಗೋಳಿಸಿದ್ದಾರೆ ಆದೇಶಿಸಿದ್ದಾರೆ
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳು ಕ್ಷುಲಕ ಕಾರಣದಿಂದ ಇದಿಗ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾರೆ ಹಣಕಾಸಿನ ವಿಚಾರ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ಇದೀಗ ಜಿಲ್ಲಾ ಆರೋಗ್ಯ ಅಧಿಕಾರಿ ಇಲಾಖೆ ವಿಚಾರಣೆ ಬಾಕಿ ಇರಿಸಿ ಇಬ್ಬರನ್ನು ಅಮಾನತುಗೊಳಿಸಿ ವರ್ಗಾವಣೆ ಮಾಡಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಕರ್ತವ್ಯ ನಿರ್ವಹಿಸುತ್ತಿರುವ ಲ್ಯಾಬ್ ಟೆಕ್ನಿಷಿಯನ್ ಉಮಾದೇವಿ ಎಂಬವರು ಆಸ್ಪತ್ರೆಗೆ ಬರುವ ರೋಗಿಗಳ ಬಳಿ ವಿವಿಧ ಪರಿಕ್ಷೆ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು ಈ ಬಗ್ಗೆ ತನಿಖೆ ನಡೆಸಿದ ಅಧಿಕಾರಿಗಳಿಗೆ ಸಹೋದ್ಯೋಗಿ ಧನಲಕ್ಷ್ಮಿ ಈ ಕೃತ್ಯ ಎಸಗಿರುವುದು ತಿಳಿದುಬಂದಿತ್ತು ಇಬ್ಬರ ನಡುವೆ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು ಈ ಬಗ್ಗೆ ಲಂಚಮುಕ್ತ ವೇದಿಕೆಯ ಕಾರ್ಯದರ್ಶಿ, ಬಿಎನ್ ಮಂಜುನಾಥ್ ನೀಡಿದ
ದೂರನ್ನು ಆಧರಿಸಿ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಧನಲಕ್ಷ್ಮಿ ಜಿ,ಎಲ್ ರವರನ್ನು ಅಮಾನತುಗೊಳಿಸಿ ತಿಪಟೂರು ತಾಲೂಕು ಬಳುವನೆರಳು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದ್ದು ಇದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮಾದೇವಿ ರವರನ್ನು ಸಹ ಅಮಾನತುಗೊಳಿಸಿ ಪಾವಗಡ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸಲಾಗಿದ್ದು ಇಲಾಖೆಯ ವಿಚಾರಣೆ ಬಾಕಿ ಇರಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ, ಚಂದ್ರಶೇಖರ್ ಆದೇಶಿಸಿದ್ದಾರೆ ವೈಯಕ್ತಿಕ ದ್ವೇಷ ಹಾಗೂ ಹಣಕಾಸಿನ ವಿಚಾರಕ್ಕೆ ವಿಡಿಯೋ ಅರಿಬಿಟ್ಟು ಪೇಚಿಗೆ ಸಿಲುಕಿದ್ದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಒಳ ಜಗಳ ಬೀದಿಗೆ ಬಂದು ಕೆಲಸಕ್ಕೆ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾರೆ