ಭೀಕರ ರಸ್ತೆ ಅಪಘಾತದಲ್ಲಿ ಖನಿಜ ನಿಗಮದ ಐ.ಎ.ಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೆರಿದಂತೆ ಮೂವರ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ!
Bangalore |ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐ.ಎ.ಎಸ್ ಅಧಿಕಾರಿ ಮಹಾಂತೇಶ ಬೀಳಗಿ ಹಾಗೂ ಸಹೋದರರು

ಸೆರಿದಂತೆ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ನಡೆದಿದೆ ರಸ್ತೆಯಲ್ಲಿ ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA04-NC-7982 ಸಂಖ್ಯೆಯ ಇನ್ನೋವಾ ಕಾರು ಹಳ್ಳಕ್ಕೆ ಉರುಳಿದೆ ಎಂದು ತಿಳಿದುಬಂದಿದೆ.ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ
ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಶ್ರೀಯುತ ಮಹಾಂತೇಶ್ ಬೀಳಗಿ ಅವರು 1974ರ ಮಾರ್ಚ್ 27ರಂದು ಜನಿಸಿದ್ದ 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂ.ಡಿ ಹಾಗಿ ಸೇವೆ ಸಲ್ಲಿದ್ದರು.ಅಲ್ಲದೇ ದಾವಣಗೆರೆ,ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಕಾರ್ಯನಿರ್ವಹಿಸಿದ್ದರು ಜನಮೆಚ್ಚುಗೆಗೆ ಪಾತ್ರರಾಗಿದ್ದ ಅವರು ಸಹೋದರರೊಂದಿಗೆ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ ಘಟನೆಯ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ @publicnewskunigal