ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನುಮಾಲು ಸಹಿತ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ!
ಕುಣಿಗಲ್ ಪಟ್ಟಣದ ಬೈಪಾಸ್ ರಸ್ತೆಯ ಬೇಗೂರು ಬ್ರಿಡ್ಜ್ ಬಳಿ ಸೋಮವಾರ ಸಂಜೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೆರೆಗೆ ಕುಣಿಗಲ್ ಪಟ್ಟಣದ ಸಿಪಿಐ ಮಾಧ್ಯ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಅಕ್ರಮವಾಗಿ ಗಾಂಜಾ ಸೋಪ್ಪನ್ನು ಮಾರಾಟ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿಯ ಚೆನ್ನಾಪುರ ಗ್ರಾಮದ ಪಾಪಣ್ಣ (60) ಎಂಬುವವರನ್ನು ಬಂಧಿಸಿ ಬಂಧಿತರಿಂದ139 ಗ್ರಾಂ ತೂಕದ ಒಣ ಗಾಂಜಾ ಜಪ್ತಿ ಮಾಡಲಾಗಿದೆ ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಕಾರ್ಯಚರಣೆಯಲ್ಲಿ ಕುಣಿಗಲ್ ಸಿಪಿಐ ಮಾಧ್ಯನಾಯಕ್, ಎ.ಎಸ್.ಐ ಪ್ರಕಾಶ್,ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಧಿಕಾರಿ ಡಾ.ಸತೀಶ್ ಬಾಬು, ಕಂದಾಯ ಇಲಾಖೆಯ ಅಧಿಕಾರಿಗಳು ವಿದಿ ವಿಜ್ಞಾನ ಪ್ರಯೋಗಾಲಯ ತಂಡ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು @publicnewskunigal