ರಾಜ್ಯ ಹೆದ್ದಾರಿ 33ರ ಗವಿಮಠದ ಬಳಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು!
ಕುಣಿಗಲ್ ತಾಲ್ಲೂಕಿನ ರಾಜ್ಯ ಹೆದ್ದಾರಿ 33ರ ಗವಿಮಠದ ಬಳಿ ಸೋಮವಾರ ಸಂಜೆ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಸಂತೆ ಮಾವತ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡೆಗೌಡನಪಾಳ್ಯ ಗ್ರಾಮದ ಚನ್ನಕೇಶವ (28) ಮೃತ ಯುವಕ ಸಂತೆಮಾವತ್ತೂರು ಗ್ರಾಮದಲ್ಲಿ ಮಾಂಸದ ಅಂಗಡಿಯನ್ನು ನಡೆಸುತ್ತಿದ್ದ ಚನ್ನಕೇಶವ ಸೋಮವಾರ ಸಂಜೆ ಕುಣಿಗಲ್ ಕಡೆಯಿಂದ ತನ್ನ ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಚನ್ನಕೇಶವ ನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಚನ್ನಕೇಶವ ಸಾವನ್ನಪ್ಪಿರುವ ಘಟನೆ ನಡೆದಿದ್ದು ಘಟನೆ ಸಂಬಂಧ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ @publicnewskunigal