ಕೌಟುಂಬಿಕ ಕಲಹ ಹಿನ್ನೆಲೆ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ ಮನಕಲಕುವ ಘಟನೆ ಬೆಚ್ಚಿಬಿದ್ದ ಗ್ರಾಮಸ್ಥರು!
ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ಮೂವರು ಆತ್ಮಹತ್ಯೆ ಶರಣಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ ತಂದೆ ಶಿವಣ್ಣ (40) ಮಕ್ಕಳಾದ ಜೀವನ್ (10) ಪ್ರಾಣೇಶ್ (6) ಮೃತಪಟ್ಟವರು ನೇಣು ಬಿಗಿದ ಸ್ಥಿತಿಯಲ್ಲಿ ಶಿವಣ್ಣನ ಮೃತದೇಹ ಪತ್ತೆಯಾಗಿದ್ದು ಮಕ್ಕಳು ಮಂಚದ ಮೇಲೆ ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟಿದ್ದು ಕೌಟುಂಬಿಕ ಕಲಹ ಹಿನ್ನೆಲೆ ಮೆಲ್ನೊಟಕ್ಕೆ ಮಕ್ಕಳನ್ನು ಕೊಂದು ತಂದೆ ನೇಣಿಗೆ ಶರಣಾಗಿದ್ದಾನೆ ಎಂದು ಸ್ಥಳಿಯರ ಆರೋಪ ಕಳೆದ ಒಂದು ವಾರದ ಹಿಂದಷ್ಟೆ ಮೃತ ಶಿವಣ್ಣನ ಪತ್ನಿ ಕಾವ್ಯ ಅಕ್ಕನ ಮಗನಾದ ಹೆಮಂತ್ ಎಂಬುವವನ ಜೋತೆಯಲ್ಲಿ ಪರಾರಿಯಾಗಿದ್ದಳು ಇದಾದ ಬಳಿಕ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೆರಿತ್ತು ಗ್ರಾಮಸ್ಥರ ಮಧ್ಯಸ್ಥಿಕೆಯಲ್ಲಿ ವಾಪಸ್ ಮನೆಗೆ ಆಲ್ಕೆರೆ ಗ್ರಾಮಕ್ಕೆ ಬಂದಿದ್ದ ಕಾವ್ಯ ಪತಿ ಇಲ್ಲದ ವೇಳೆ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದಳು ಇದರಿಂದ ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಮೆಲ್ನೊಟಕ್ಕೆ ಕಂಡುಬಂದಿದೆ ಸೋಸೆಯ ಕಾಟಕ್ಕೆ ಬೆಸತ್ತ ಶಿವಣ್ಣನ ತಾಯಿ ಹೊನ್ನಮ್ಮ ಕಳೆದ ಮೂರು ವರ್ಷಗಳ ಹಿಂದೆ ಬಾವಿಗೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ ಸ್ಥಳಕ್ಕೆ ಕುಣಿಗಲ್ ಠಾಣೆಯ ಸಿಪಿಐ. ಮಾಧ್ಯಾನಾಯಕ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ ತನಿಖೆಯಿಂದ ಬೆಳಕಿಗೆ ಬರಬೇಕಿದೆ@publicnewskunigal