ಎಸ್.ಐ.ಆರ್ ಕರ್ತವ್ಯಕ್ಕೆ ತೆರಳುತಿದ್ದ ವೇಳೆ ರಸ್ತೆ ಅಪಘಾತ ಗ್ರಾಮ ಆಡಳಿತ ಅಧಿಕಾರಿ ಸಾವು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಅಧಿಕಾರಿಗಳ ಪ್ರತಿಭಟನೆ ನ್ಯಾಯಕ್ಕಾಗಿ ಕುಟುಂಬಸ್ಥರ ಆಗ್ರಹ!
ತುಮಕೂರು;-ರಾಜ್ಯ ಹೆದ್ದಾರಿ 33ರ ತುಮಕೂರು ಕುಣಿಗಲ್ ರಸ್ತೆಯ ಗೂಳೂರು ಬಳಿ ಶನಿವಾರ ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿ ಎಸ್.ಐ.ಆರ್ ಕರ್ತವ್ಯಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ ಅಪರಿಚಿತ ವಾಹನ ಡಿಕ್ಕಿಯಾದ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಮ ಆಡಳಿತ ಅಧಿಕಾರಿ ಭುವನಾ ರವರನ್ನು ತುಮಕೂರು ನಗರದ ಸಿದ್ದಗಂಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ 26 ವರ್ಷದ ಭುವನಾ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದ್ದು ಕಂದಾಯ ಇಲಾಖೆಯ ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ, ಅಧಿಕಾರಿಗಳ ಒತ್ತಡದಿಂದ ಘಟನೆ ಸಂಬವಿಸಿದ್ದು ಕೂಡಲೆ ತುಮಕೂರು ತಹಶೀಲ್ದಾರ್ ರಾಜೇಶ್ವರಿ ರವರನ್ನು ಅಮಾನತ್ತು ಗೊಳಿಸುವಂತೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.ಮೇಲಾಧಿಕಾರಿಗಳ ಒತ್ತಡವೆ ಅಪಘಾತಕ್ಕೆ ಕಾರಣ ಎಂದು ಕುಟುಂಬಸ್ಥರ ಆರೋಪವಾಗಿದೆ ಘಟನೆ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಎಸ್.ಐ.ಆರ್ ಪ್ರಾರಂಭವಾದ ಬಳಿಕ ಬಿ.ಎಲ್.ಓ ಸೇರಿದಂತೆ ಹಲವು ಅಂತದ ಅಧಿಕಾರಿಗಳ ಮೇಲೆ ಕೆಲಸದ ಒತ್ತಡ ಹೆಚ್ಚಿದ್ದು ಬೆಳಗ್ಗೆ ಎಂಟು ಗಂಟೆಯ ಒಳಗೆ ಸ್ಥಳಕ್ಕೆ ಬೇಟಿನೀಡಿ ಜಿಪಿಎಸ್ ಆಧಾರಿತ ಪೋಟೊ ಹಾಕಿ ಬಳಿಕ ಕರ್ತವ್ಯ ನಿರ್ವಹಿಸಬೇಕು ಎಂಬ ನಿಯಮವನ್ನು ರೂಪಿಸಲಾಗಿದ್ದು ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಚುನಾವಣೆ ಅಧಿಕಾರಿ ಆಗೂ ಜಿಲ್ಲಾಧಿಕಾರಿ ಶುಭಕಲ್ಯಾಣ್ ಒತ್ತಡ ಹೇರುತ್ತಿರುವ ಕಾರಣ ಕೆಲಸ ನಿರ್ವಹಿಸುವ ಸಲುವಾಗಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಗ್ರಾಮ ಆಡಳಿತ ಅಧಿಕಾರಿ ಭುವನಾ ಸಾವನ್ನಪೃಪಿರುವುದಾಗಿ ಸಹೋದ್ಯೋಗಗಳು ಆಕ್ರೋಶ ವ್ಯಕ್ತಪಡಿಸಿದ್ದು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ @publicnewskunigal