ಪಟ್ಟಣದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿನಿಯರಿಗೆ ಆಟೋ ಡಿಕ್ಕಿಯಾಗಿ ಗಾಯ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ 112 ಪೊಲೀಸರು
ಕುಣಿಗಲ್ ಪಟ್ಟಣದ BM ರಸ್ತೆಯಲ್ಲಿ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಆಟೋರಿಕ್ಷ ಡಿಕ್ಕಿಯಾಗಿ ಗಾಯಗೊಂಡಿದ್ದ ಅವರನ್ನು 112 ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ ಸೋಮವಾರ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ BM ರಸ್ತೆಯ ಎಸ್.ಬಿ.ಎಂ ಬ್ಯಾಂಕ್ ಬಳಿ ಆಟೋ ಚಾಲಕನ ಅವೈಜ್ಞಾನಿಕ ಚಾಲನೆಯ ಕಾರಣದಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವಿದ್ಯಾರ್ಥಿನಿಯರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರಣ ಕೆಳಗೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ತಮ್ಮ ವಾಹನದಲ್ಲೆ ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಬಳಿಕ ಪೋಷಕರಿಗೂ ಮಾಹಿತಿ ನೀಡಿದ್ದಾರೆ ಅಪಘಾತದ ಬಳಿಕ ಆಟೋ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ ಆಟೋರಿಕ್ಷವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಮಧ್ಯ ಸೇವನೆ ಮಾಡಿದ್ದ ಚಾಲಕ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣದಿಂದ ಪಟ್ಟಣದಲ್ಲಿ ಪಾದಚಾರಿ ಮಾರ್ಗ ಸಂಪೂರ್ಣವಾಗಿ ಒತ್ತುವರಿಯಾಗಿದ್ದು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಅಡ್ಡದಿಡ್ಡಿ ವಾಹನಗಳನ್ನು ನಿಲ್ಲಿಸಿರುವ ಕಾರಣ ಪಾದಚಾರಿ ಮಾರ್ಗ ಸಂಪೂರ್ಣವಾಗಿ ಗೂಡಗಂಡಿ ವ್ಯಾಪಾರಿಗಳ ಪಾಲಾಗಿದೆ ಮಕ್ಕಳು ನಿತ್ಯ ರಸ್ತೆಯಲ್ಲಿ ಓಡಾಡುವಂತಾಗಿದೆ ದೊಡ್ಡ ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಹೆಚ್ಚೆತ್ತು ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕರು ಮಕ್ಕಳ ಒಡಾಟಕ್ಕೆ ಅನುಕೂಲ ಕಲ್ಪಿಸಬೇಕಿದ್ದು ಈ ಬಗ್ಗೆ ತಾಲ್ಲೂಕಿನ ಜನ ಪ್ರತಿನಿಧಿಗಳು ಗಮನ ಹರಿಸಬೇಕಿದೆ@publicnewskunigal