ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಕಲ್ಲು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ರಾಜೇಂದ್ರಪುರ ಗ್ರಾಮದ ಮಧುಸ್ಟೋನ್ ಕ್ರಷರ್ ನಲ್ಲಿ ಕಲ್ಲು ತುಂಬಿದ್ದ ಟಿಪ್ಪರ್ ಲಾರಿ ಪ್ರಪಾತಕ್ಕೆ ಊರುಳಿ ಬಿದ್ದು ಚಾಲಕ ಮತ್ತು ಸಹಾಯಕ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ ಸೋಮವಾರ ಕ್ರಷರ್ ನಲ್ಲಿ ಕೆಲಸ ಮಾಡುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಕಲ್ಲು ಕ್ವಾರಿಯ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ಮದ್ಯಪ್ರದೇಶದ ಮೂಲದ ಲಾರಿ ಚಾಲಕ ಅಕ್ಷಯ್ (32) ಕೋಲ್ಕತ್ತ ಮೂಲದ ಲಾರಿ ಸಹಾಯಕ ಸಹದೇವ್ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ ಗುತ್ತಿಗೆದಾರ ಸಂತೋಷ್ ಎಂಬುವವರ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ಎಂದಿನಂತೆ ಕಲ್ಲುಗಳನ್ನು ತುಂಬಿಕೊಂಡು ಹೋಗುವಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿದ್ದು ಮೇಲಿನಿಂದ ಹಳ್ಳಕ್ಕೆ ಉರುಳಿ ಬಿದ್ದಿದೆ ಸ್ಥಳದಲ್ಲೆ ಇಬ್ಬರು ಮೃತಪಟ್ಟಿದ್ದು ಘಟನೆ ಸ್ಥಳಕ್ಕೆ ಕುಣಿಗಲ್ ಸಿಪಿಐ ಮಾಧ್ಯನಾಯಕ್, ಪಿ.ಎಸ್.ಐ ಶ್ರೀನಿವಾಸ್ ಪ್ರಸಾದ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ @publicnewskunigal