ಆಗಸ್ಟ್ 15 ರಿಂದ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ ಕಾರ್ಡ್ ಅಭಿಯಾನ ಅಮ್ಮಿಕೋಳ್ಳಲಾಗಿದ್ದು ಅಗತ್ಯ ದಾಖಲೆ ನೀಡಿ ಜಾಬ್ ಕಾರ್ಡ್ ಪಡೆಯಬಹುದಾಗಿದೆ!
ಕುಣಿಗಲ್, ಗ್ರಾಮೀಣ ಭಾಗದ ಕೂಲಿಕಾರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿಬಿ ಜೀರಾಮ್ ಜೀ ಯೋಜನೆಯಡಿ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಒಂದು ತಿಂಗಳ ಕಾಲ ಕುಣಿಗಲ್ ತಾಲ್ಲೂಕಿನ ಎಲ್ಲಾ 36 ಗ್ರಾಮ ಪಂಚಾಯಿತಿಗಳಲ್ಲಿ ಬೃಹತ್ ‘ಜಾಬ್ ಕಾರ್ಡ್ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಅಭಿಯಾನದಡಿ ಹೊಸ ಜಾಬ್ ಕಾರ್ಡ್ ಪಡೆಯಲು ಅರ್ಹರಾಗಿರುವ ಕುಟುಂಬಗಳನ್ನು ಗುರುತಿಸುವುದು, ಈಗಾಗಲೇ ಹೊಂದಿರುವ ಜಾಬ್ ಕಾರ್ಡ್ಗಳನ್ನು ನವೀಕರಿಸುವುದು ಹಾಗೂ ಅರ್ಹ ಕಾರ್ಮಿಕರನ್ನು ಉದ್ಯೋಗ ಖಾತರಿ ಯೋಜನೆಯ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಲಾಗುತ್ತದೆ.
ಮನೆ ಬಾಗಿಲಿಗೆ ಭೇಟಿ ನಿಡಲಿರುವ ಅಧಿಕಾರಿಗಳು;-ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO), ಐಇಸಿ ಸಂಯೋಜಕರು, ಕಾಯಕ ಮಿತ್ರರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸ್ಥಳೀಯ ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಜಂಟಿಯಾಗಿ ಮನೆ-ಮನೆಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ನೋಂದಣಿ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ಯೋಜನೆಯಡಿ ನೊಂದಾಯಿಸಿಕೊಳ್ಳುವ ಕೂಲಿ ಕಾರ್ಮಿಕರಿಗೆ 125 ದಿನಗಳ ಉದ್ಯೋಗ – ದಿನಗೂಲಿ ₹382 ವಿಬಿ-ಜಿ ರಾಮ್-ಜಿ (VB-G RAM G) ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ 125 ದಿನಗಳ ಉದ್ಯೋಗ ಖಾತರಿ ಕಲ್ಪಿಸುವ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ದಿನಗೂಲಿ ₹382 ನಿಗದಿಯಾಗಿದ್ದು, ಅರ್ಹ ಕುಟುಂಬವು ಪೂರ್ಣ 125 ದಿನಗಳ ಕೆಲಸ ಪಡೆದರೆ ಗರಿಷ್ಠ ₹47,750 ವರೆಗೆ ಕೂಲಿ ಆದಾಯ ಪಡೆಯಲು ಅವಕಾಶವಿದೆ.ಯೋಜನೆಯಡಿ ಮಹಿಳೆಯರ ಉದ್ಯೋಗ ಪಾಲ್ಗೊಳ್ಳುವಿಕೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಗ್ರಾಮೀಣ ಕುಟುಂಬಗಳ ಜೀವನೋಪಾಯ ಬಲಪಡಿಸುವುದು, ಆದಾಯ ಹೆಚ್ಚಿಸುವುದು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ,
ಹೊಸ ಜಾಬ್ ಕಾರ್ಡ್ ಪಡೆಯುವುದು ಸರಳ ಹೊಸ ಜಾಬ್ ಕಾರ್ಡ್ ಪಡೆಯಲು ಅರ್ಹರು ಆಧಾರ್ ಕಾರ್ಡ್ ಹಾಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಪಾಸ್ಬುಕ್ನೊಂದಿಗೆ ತಮ್ಮ ಸಮೀಪದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಬೇಕು. ದಾಖಲೆಗಳ ಪರಿಶೀಲನೆ ಹಾಗೂ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಜಾಬ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ವಿಶೇಷ ವರ್ಗಗಳಿಗೆ ಆದ್ಯತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಪ್ರಧಾನ ಕುಟುಂಬಗಳು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಶೇ.40ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರುವ ವಿಶೇಷಚೇತನರಿಗೆ ಆದ್ಯತೆಯ ಮೇರೆಗೆ ನಮೂನೆ-1ರ ಮೂಲಕ ಪ್ರತ್ಯೇಕ ಉದ್ಯೋಗ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ.ಆದ್ದರಿಂದ ಕುಣಿಗಲ್ ತಾಲ್ಲೂಕಿನ ಎಲ್ಲಾ ಅರ್ಹ ಗ್ರಾಮೀಣ ಕೂಲಿಕಾರರು ಹಾಗೂ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 15ರೊಳಗಾಗಿ ತಮ್ಮ ಸಮೀಪದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಜಾಬ್ ಕಾರ್ಡ್ ಪಡೆದು ಉದ್ಯೋಗ ಖಾತರಿ ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ, @publicnewskunigal