ಶಾಲೆ ಪ್ರಾರಂಭವಾಗಿ ಪರೀಕ್ಷೆ ಸಮಿಪಿಸಿದರು ಸಹ ದೊಡ್ಡಮಧುರೆ ಸರ್ಕಾರಿ ಶಾಲೆಯ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆಯಾಗಿಲ್ಲ!
ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿ ವ್ಯಾಪ್ತಿಯ ದೊಡ್ಡಮಧುರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಪ್ರಾರಂಭವಾಗಿ ಮೂರು ತಿಂಗಳು ಕಳೆದು ಅರ್ಧವಾರ್ಷಿಕ ಪರೀಕ್ಷೆ ಸಮಿಪಿಸುತ್ತಿದ್ದರು ಸಹ ಶಾಲೆಯ ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕ ಸಿಕ್ಕಿಲ್ಲ ಈ ಬಗ್ಗೆ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ,ತುಮಕೂರು ಜಿಲ್ಲೆಯ ಉಪ ನಿರ್ದೇಶಕರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದರು ಸಹ ಇದುವರೆಗೆ ಯಾವುದೆ ಕ್ರಮ ಕೈಗೊಂಡಿಲ್ಲ,ಇನ್ನೂ ಮುಚ್ಚಿ ಹೊಗುತ್ತಿದ್ದ ಸರ್ಕಾರಿ ಶಾಲೆಯನ್ನು ಗ್ರಾಮದ ಹಳೆಯ ವಿದ್ಯಾರ್ಥಿಗಳು ಸಂಘ ಸ್ಥಾಪಿಸಿ ಶಾಲೆಯನ್ನು ಅಭಿವೃದ್ದಿ ಪಡಿಸಿ ದಾಖಲಾತಿಯನ್ನು ಹೆಚ್ಚಿಸಿ ತಾಲ್ಲೂಕಿಗೆ ಮಾದರಿ ಶಾಲೆಯನ್ನಾಗಿ ಪರಿವರ್ತಿಸಿದ್ದಾರೆ ಪ್ರಸ್ಥುತ 2025/26 ನೇ ಸಾಲಿನಲ್ಲಿ ಶಾಲೆಯಲ್ಲಿ ಎಲ್.ಕೆ.ಜಿ ಯಿಂದ ಏಳನೆ ತರಗತಿ ವರೆಗೆ 305 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಆದರೆ ನೂರಕ್ಕೂ ಅಧಿಕ ಮಕ್ಕಳಿಗೆ ಪ್ರಸಕ್ತ ಸಾಲಿನ ಪಠ್ಯ ಪುಸ್ತಕ ಸಿಕ್ಕಿಲ್ಲ ಇದರಿಂದ ಪೊಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪರೀಕ್ಷೆ ಸಮೀಪಿಸಿದ್ದರು ಇನ್ನೂ ಮಕ್ಕಳಿಗೆ ಪಠ್ಯ ಪುಸ್ತಕ ನೀಡಿಲ್ಲ ಪಾಠ ಪ್ರವಚನದಲ್ಲಿ ಹಿಂದೆ ಉಳಿಯಲಾಗಿದೆ ಅಧಿಕಾರಿಗಳ ನಿರ್ಲಕ್ಷ್ಯ ಬೇಜವಾಬ್ದಾರಿಯ ಕಾರಣದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಿದೆ ಕೂಡಲೆ ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕೆಂದು ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರಾದ ಅಲೊಕ್ ಕುಮಾರ್, ಕುಮಾರಸ್ವಾಮಿ, ಪುನೀತ್,ಲಕ್ಕಣ್ಣ,ಆಗ್ರಹಿಸಿದ್ದಾರೆ@publicnewskunigal