ಸೆಪ್ಟೆಂಬರ್ 19 ರಂದು ಹುಲಿಯೂರುದುರ್ಗ ಪಟ್ಟಣದಲ್ಲಿ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಆಯೋಜನೆ!
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿ ಸೆಪ್ಟೆಂಬರ್ 19ರ ಶನಿವಾರ ದಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಅಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ತಿಳಿಸಿದರು, ಹುಲಿಯೂರುದುರ್ಗ ಪಟ್ಟಣದ ಹುಲಿಯೂರಮ್ಮ ಸಮುದಾಯ ಭವನದಲ್ಲಿ ಗುರುವಾರ ಹಮ್ಮಿಕೋಳ್ಳಲಾಗಿದ್ದ ಪ್ರಜಾ ಸೇವೆ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲಾಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಅಮ್ಮಿಕೋಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಸಂಸದರು ಹಾಗೂ ಶಾಸಕರು ವಿಧಾನಪರಿಷತ್ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತಿ ಇರಲಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪಾರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ ತಿಳಿಸಿದರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳು ಪ್ರಚಾರ ಪಡಿಸಲಿದ್ದು ಅರ್ಜಿಗಳನ್ನು ವಿತರಿಸಲಾಗುವುದು ಅರ್ಜಿ ಪಡೆದ ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಅರ್ಜಿಯಲ್ಲಿ ನಮುದಿಸಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಥಾವ ಉಪ ಮುಖ್ಯ ಮಂತ್ರಿಗಳಿಗೆ ನೀಡತಕ್ಕದ್ದು,ಅರ್ಜಿ ಪಡೆದ ನಂತರ ಐ.ಪಿ.ಜಿ.ಆರ್.ಎಸ್ ಮೂಲಕ ಸಿಕೃತಿ ನೀಡಲಾಗುವುದು, ಕಾರ್ಯಕ್ರಮದ ದಿನದಂದು ಸಾರ್ವಜನಿಕರ ಅಹವಾಲು ಸ್ವೀಕರಿಸಲು ಇಲಾಖವಾರು ಕೌಂಟರ್ ಗಳನ್ನು ತೆರೆಯಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ತಿಪ್ಪೇಸ್ವಾಮಿ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದರು ಈ ವೇಳೆ ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ನಾಹೀದ ಜಮ್ ಜಮ್,ತಹಶೀಲ್ದಾರ್ ಕರಿಯ ನಾಯ್ಕ್,ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣ ಅಧಿಕಾರಿಯ ವಸಂತ್ ಕುಮಾರ್,ಉಪ ತಹಶೀಲ್ದಾರ್ ಜಗದೀಶ್,ಕಂದಾಯ ಇಲಾಖೆಯ ಸೆರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿವರ್ಗ ಉಪಸ್ಥಿತರಿದ್ದರು,@publicnewskunigal