ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕನ ಕಿರುಕುಳ ಆರೋಪ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ದೂರು ದಾಖಲು ಆರೋಪಿ ಪೊಲೀಸರ ವಶಕ್ಕೆ!
ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿ ವ್ಯಾಪ್ತಿಯ ವಿದ್ಯಾರ್ಥಿನಿ ಶಾಲೆ ಮುಗಿಸಿ ಮನೆಗೆ ಬಂದು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ ಕುಣಿಗಲ್ ತಾಲ್ಲೂಕಿನ ಅರವಿಂದ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಎಲ್.ಕೆ.ಜಿ ಯಿಂದ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪ್ರಸ್ತುತ ಒಂಭತ್ತನೆ ತರಗತಿ ಒದುತ್ತಿದ್ದಳು ಎಂದಿನಂತೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿ ಮನೆಗೆ ಬಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದ್ದು ಪೋಷಕರ ಆತಂಕಕ್ಕೆ ಕಾರಣ ವಾಗಿದೆ ಶಾಲೆಯಲ್ಲಿ ಹಿಂದಿ ಶಿಕ್ಷಕ ಪ್ರವೀಣ್ ಎಂಬಾತ ವಿದ್ಯಾರ್ಥಿನಿಯ ಹಿಂದೆ ಬಿದ್ದು ಪೋನ್ ಮೂಲಕ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿದ ವಿದ್ಯಾರ್ಥಿನಿಯ ತಾಯಿ ಮತ್ತು ಸಹೊದರ ಶಾಲೆಗೆ ತೆರಳಿ ಶಿಕ್ಷಕನ ವರ್ತನೆಯ ಬಗ್ಗೆ ಶುಕ್ರವಾರ ಬೆಳಿಗ್ಗೆ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದಾರೆ ಇದಾದ ಬಳಿಕ ಮನೆಗೆ ಬಂದು ಪೊಷಕರು ಸಂತೆಗೆ ತೆರಳಿದ್ದ ವೇಳೆ ಶಾಲೆಯಿಂದ ಮನೆಗೆ ಬಂದ ವಿದ್ಯಾರ್ಥಿನಿ ಏಕಾ ಏಕಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.ಶಿಕ್ಷಕ ಪ್ರವೀಣ್ ನಿತ್ಯ ವಿದ್ಯಾರ್ಥಿನಿಯ ಪೋಷಕರ ಮೊಬೈಲ್ ಪೋನ್ ಗೆ ಸಂದೇಶ ಕಳುಹಿಸಿ ಪ್ರೀತಿಸುವಂತೆ ಕೀರುಕುಳ ನೀಡುತ್ತಿದ್ದ ಎಂದು ಪೋಷಕರು ಆರೋಪಿಸಿದ್ದು ವಿದ್ಯಾರ್ಥಿನಿ ಜೋತೆಗಿನ ವಾಟ್ಸಪ್ ಚಾಟ್ ಕೂಡ ಪತ್ತೆಯಾಗಿದೆ. ಬಳಿಕ ಹೆಬ್ಬೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರು ಸಹ ಪೊಲೀಸರು ದೂರು ಸ್ವೀಕರಿಸಿಲ್ಲ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಮಹಿಳಾ ಠಾಣೆಗೆ ತೆರಳಿ ದೂರು ನೀಡುವಂತೆ ಸಂತ್ರಸ್ತರಿಗೆ ತಿಳಿಸಿದ್ಧಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಕುಟುಂಬಸ್ಥರು ತುಮಕೂರಿನ ಮಹಿಳಾ ಠಾಣಿಗೆ ತೆರಳಿ ದೂರು ದಾಖಲಿಸಿದ್ದಾರೆ ಇನ್ನಾದರು ಸಂಬಂಧ ಪಟ್ಟ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಂಡು ನೊಂದ ಕುಟುಂಬಸ್ಥರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ @publicnewskunigal