ಮಕ್ಕಳಿಲ್ಲದೆ ಮುಚ್ಚಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ಉದ್ಯಾನವನ ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ರೂಪಾಯಿ ಗುಳುಂ!

Spread the love

ಮಕ್ಕಳಿಲ್ಲದೆ ಮುಚ್ಚಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ಕಾಮಗಾರಿ ನಡೆಸದೆ ಉದ್ಯಾನವನ ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ರೂಪಾಯಿ ಗುಳುಂ!

ಕುಣಿಗಲ್ ತಾಲ್ಲೂಕಿ ಕಸಬಾ ಹೋಬಳಿ ವ್ಯಾಪ್ತಿಯ ಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ 2021-22ನೇ ಸಾಲಿನಲ್ಲಿ ಉದ್ಯಾನವನ ಅಭಿವೃದ್ಧಿಯ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಲಕ್ಷಾಂತರ ರೂಪಾಯಿ ಹಣ ಲಪಟಸಿರುವ ಆರೋಪ ಕೇಳಿ ಬಂದಿದೆ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹೊಸೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೊಜನೆಯಡಿಯಲ್ಲಿ

ಗ್ರಾಮದಲ್ಲಿ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಲ್ಲದೆ ಮುಚ್ಚಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ಉದ್ಯಾನವನ ನಿರ್ಮಾಣ ಹೆಸರಿನಲ್ಲಿ ಸುಮಾರು ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿರುವುದು ಬೆಳಕಿಗೆ ಬಂದಿದೆ ಇದಲ್ಲದೆ 2022-23 ನೇ ಸಾಲಿನಲ್ಲಿ ಮುಂದುವರೆದ ಕಾಮಗಾರಿಯನ್ನಾಗಿ ಇದೇ ಕೆಲಸವನ್ನು ಮತ್ತೆ ಕೈಗೆತ್ತಿಕೊಳ್ಳುವ ಸಲುವಾಗಿ ಶಾಲೆಯ ಮುಂದೆ ನಾಮಪಲಕವನ್ನು ಸಹ ಬರೆಯಲಾಗಿದೆ ಆದರೆ ಶಾಲೆಯ ಆವರಣದಲ್ಲಿ ಕಾಮಗಾರಿ ನಡೆಯದೆ ಇದ್ದರೂ ಸಹ ನರೇಗಾ ಯೋಜನೆಯಡಿ ಹಣ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಆದರೆ ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳೀಯರು ದೂರು ನೀಡಿದರು ಸಹ ಯಾವುದೆ ಕ್ರಮ ಕೈಗೊಳ್ಳದೆ ಜಾಣ ನಿದ್ರೆಗೆ ಜಾರಿದಂತೆ ಕಾಣುತ್ತಿದೆ

ಸಂತೆಮಾವತ್ತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಇಂಜಿನಿಯರ್,ಗುತ್ತಿಗೆದಾರ ಸೇರಿದಂತೆ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳ ಪಾತ್ರ ಇದರಲ್ಲಿ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಇನ್ನಾದರೂ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ

ಗ್ರಾಮದಲ್ಲಿ ಮುಚ್ಚಿರುವ ಶಾಲೆಯ ಆವರಣದಲ್ಲಿ ಕಾಮಗಾರಿ ನಡೆಸದೆ ಉದ್ಯಾನವನ ಅಭಿವೃದ್ಧಿ ಹೆಸರಲ್ಲಿ ಸರ್ಕಾರದ (2.80) ಲಕ್ಷ ರೂಪಾಯಿ ಹಣವನ್ನು ದುರುಪಯೋಗ ಮಾಡಿರುವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಇದಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತ್ತು ಗೊಳಿಸಬೇಕೆಂಬುದು ಗ್ರಾಮದ ಸಾರ್ವಜನಿಕರ ಆಗ್ರಹವಾಗಿದೆ

ಇದಲ್ಲದೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಡಿ ಹೊಸೂರು ಗ್ರಾಮದಲ್ಲಿ ಕೆರೆ ಅಭಿವೃದ್ದಿ ಹಾಗೂ ಸಿಸಿ ರಸ್ತೆ ನಿರ್ಮಾಣದಲ್ಲಿ ಸಾಕಷ್ಟು ಆಕ್ರಮಗಳು ನಡೆದಿರುವ ಬಗ್ಗೆ ಗ್ರಾಮದ ಗಂಗಾಧರ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದಿರು ಕಾಮಗಾರಿಗಳ ತನಿಖೆಯಿಂದಷ್ಟೇ ಅಕ್ರಮಗಳು ಬೆಳಕಿಗೆ ಬರಬೇಕಿದೆ ಕಾಮಗಾರಿಯನ್ನು ಮಾಡದೆ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿರುವ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ,news desk @kunigalpublicnews