ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ ದಾಖಲು!

Spread the love

ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರ ಗ್ರಾಮದಲ್ಲಿ ಡಿ,ಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನ ಮೇಲೆ ಹಲ್ಲೆ ನಡೆಸಿ ಚಾಕು ಇರಿದಿರುವ ಆರೋಪ ಕೇಳಿಬಂದಿದೆ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿ,ಕೆ ಸುರೇಶ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತನಿಗೆ ಬಿಜೆಪಿಯ ಮೂವರು ಕಾರ್ಯಕರ್ತರು ಹಲ್ಲೆ ಮಾಡಿ ಬಳಿಕ ಚಾಕುವಿನಿಂದ ಇರಿದ ಆರೋಪ ಕೇಳಿಬಂದಿದೆ ಇನ್ನೂ ಲೋಕಸಭಾ ಚುನಾವಣೆ ಸಮಿಪಿಸುತ್ತಿರುವ ಹೊತ್ತಲ್ಲಿ ತಾಲ್ಲೂಕಿನಲ್ಲಿ ರಾಜಕೀಯ ವೈಷಮ್ಯಗಳು ಹೆಚ್ಚುತ್ತಿದ್ದು ಸದ್ದಿಲ್ಲದೆ ಪೊಲೀಸ್ ಠಾಣೆಗಳಲ್ಲಿ ಪರ ಹಾಗೂ ವಿರೋಧದ ಪ್ರಕರಣಗಳು ಸಹ ದಾಖಲಾಗುತ್ತಿವೆ,

ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ ವೆಂಕಟೆಗೌಡನಪಾಳ್ಯ ಗ್ರಾಮದ ಕೀರ್ತಿ ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ ಚಂದ್ರು,ಜಗದೀಶ್​, ಸುನೀಲ್ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತರೆಂದು ಆರೋಪಿಸಲಾಗಿದೆ ಹಲ್ಲೆಗೊಳಗಾದ ಕೀರ್ತಿ ಅವರನ್ನು ಕುಣಿಗಲ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಕಾಂಗ್ರೆಸ್​ ಮುಖಂಡ ಡಿ,ಕೆ‌ ಸುರೇಶ್ ಅವರ ನಾಮಪತ್ರ ಸಲ್ಲಿಕೆಗೆ ಯಾಕೆ‌ ಹೋಗಿದ್ದೆ ಎಂದು ಕೀರ್ತಿ ಅವರ ಜೊತೆಗೆ ಶನಿವಾರ ಸಂಜೆ ನಡೆಮಾವಿನಪುರ ಗ್ರಾಮ ಪಂಚಾಯಿತಿ ಬಳಿ ಮೂವರು ಗಲಾಟೆ ತೆಗೆದಿದ್ದಾರೆ ಬಳಿಕ ದೊಣ್ಣೆಯಿಂದ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪ ಕೇಳಿಬಂದಿದೆ ರಾಜಕೀಯ ವೈಷಮ್ಯ ಹಿನ್ನೆಲೆ‌ಯಲ್ಲಿ ಹಲ್ಲೆ ಮಾಡಿದ್ದಾರೆಂದು ಕಾಂಗ್ರೆಸ್​​ ಕಾರ್ಯಕರ್ತ ಕೀರ್ತಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿಗಳ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ (IPC 1860 U/S 307,34) ಅಡಿಯಲ್ಲಿ ಪ್ರಕರಣ ದಾಖಲಾಗಿದೆ,@publicnewskunigal