ಸರ್ಕಾರಿ ಶಾಲೆಯ ಮಕ್ಕಳ ಶೌಚಾಲಯಕ್ಕೆ ಬೀಗ ಕಣ್ಮುಚ್ಚಿ ಕುಳಿತ ಶಿಕ್ಷಣ ಇಲಾಖೆ ಮಕ್ಕಳಿಗೆ ಇಗ ಬಯಲೆ ಶೌಚಾಲಯ!
ಕುಣಿಗಲ್ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಕಾಡುಮತ್ತಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಇತ್ತಿಚೇಗೆ ನಿರ್ಮಿಸಿರುವ ಶೌಚಾಲಯಕ್ಕೆ ಬೀಗ ಜಡಿದು ಮಕ್ಕಳಿಗೆ ಶೌಚಾಲಯ ಇಲ್ಲದಂತೆ ಮಾಡಲಾಗಿದೆ ಇನ್ನೂ ಶಾಲೆಗೆ ಬರುವ ಮಕ್ಕಳು ಬಯಲು ಶೌಚಾಲಯಕ್ಕೆ ತೆರಳುವ ಸ್ಥಿತಿ ನಿರ್ಮಾಣವಾಗಿದೆ ಗ್ರಾಮದ ಶಾಲೆಯಲ್ಲಿ ಸುಮಾರು 45 ಮಕ್ಕಳು ಕಲಿಯುತ್ತಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಇದ್ದು ಶಾಲೆಯಿಂದ ಶೌಚಕ್ಕೆ ಮನೆ ತೆರಳುತ್ತೆವೆ ಎಂದು ಹೆಣ್ಣು ಮಕ್ಕಳು ಅಸಮದಾನ ವ್ಯಕ್ತಪಡಿಸಿದ್ದಾರೆ
ನರೇಗಾ ಯೋಜನೆಯಡಿ ಶಾಲೆಯ ಅವರಣದಲ್ಲಿ ಸುಮಾರು ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು ಗ್ರಾಮ ಪಂಚಾಯಿತಿಯ ಸದಸ್ಯನೊಬ್ಬನ ಮುಂದಾಳತ್ವದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ ಎಂದು ಸ್ಥಳಿಯರು ತಿಳಿಸಿದ್ದು ಶೌಚಾಲಯ ನಿರ್ಮಾಣ ಕಾರ್ಯ ಕ್ಕೆ ಇಗಾಗಲೆ ಎರಡು ಲಕ್ಷದ ಐವತ್ತು ಎರಡು ಸಾವಿರ ರೂಪಾಯಿ ಬಿಲ್ ಪಾವತಿಸಲಾಗಿದೆ ಆದರೆ ಬಾಕಿ ಬಿಲ್ ಬಂದಿಲ್ಲ ಎಂದು ಶೌಚಾಲಯಗಳಿಗೆ ಬೀಗ ಹಾಕಲಾಗಿದೆ ಶಾಲೆ ಪ್ರಾರಂಭವಾಗಿ ಹಲವು ದಿನಗಳು ಕಳೆದಿದೆ ಆದರೆ ತಾಲ್ಲೂಕಿನ ಬಹುತೆಕ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಇಲ್ಲದಂತಾಗಿದೆ ಇನ್ನೂ ಶಿಕ್ಷಣ ಇಲಾಖೆ ಅಧಿಕಾರಿಗಳು ಕಂಡರು ಕಾಣದಂತಗಿದ್ದಾರೆ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು ಶೌಚಾಲಯ ಸೆರಿದಂತೆ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ತಾಲ್ಲೂಕು ಆಡಳಿತ ಶಿಕ್ಷಣ ಇಲಾಖೆ ವಿಫಲವಾಗಿದೆ ಇನ್ನಾದರು ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಇತ್ತ ಗಮನ ಹರಿಸಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕಿದೆ @publicnewskunigal