ಕುಣಿಗಲ್:-ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅತಿಕ್ರಮಿಸಿಕೊಂಡು ವಾಣಿಜ್ಯ ಕಟ್ಟಡ ಸೇರಿದಂತೆ ಧಾರ್ಮಿಕ ಕಟ್ಟಡ ನಿರ್ಮಾಣ ಮಾಡಿ ಸರ್ಕಾರಿ ಭೂಮಿ ಕಬಳಿಕೆ ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ತಾಲ್ಲೂಕು ಬಜರಂಗದಳ ಪ್ರಖಂಡದ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಸಂಬಂಧ ಪಟ್ಟವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ,
ಕುಣಿಗಲ್ ತಾಲ್ಲೂಕಿನ ಯಡಿಯೂರು ಹೋಬಳಿ ವ್ಯಾಪ್ತಿಯ ಅಲಪ್ಪನಗುಡ್ಡೆ ಗ್ರಾಮದ ಹಳೆಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಖರಾಬು ಜಾಗದಲ್ಲಿ ಯಾವುದೆ ಅನುಮತಿ ಇಲ್ಲದೆ ಧಾರ್ಮಿಕ ಕಟ್ಟಡ ನಿರ್ಮಾಣ ಮಾಡುತ್ತಿರುವುದಲ್ಲದೆ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ ಸರ್ಕಾರಿ ಭೂಮಿ ಅತಿಕ್ರಮಣವಾಗುತ್ತಿದ್ದರು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸರ್ಕಾರಿ ಭೂಮಿ ರಕ್ಷಣೆ ಮಾಡುವಲ್ಲಿ ವಿಫಲವಾಗಿದ್ದಾರೆ ಅಧಿಕಾರಿಗಳ ನಿರ್ಲಕ್ಷ್ಯ ವಹಿಸುತ್ತಿರುವುದು ನೋಡಿದರೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಹಳೆಯ ರಾಷ್ಟ್ರೀಯ ಹೆದ್ದಾರಿ 48 ಹೊಂದಿಕೊಂಡಂತೆ ಇರುವ ಭೂಮಿಗೆ ಹೆಚ್ಚಿನ ಬೆಲೆ ಇದ್ದು ಧಾರ್ಮಿಕ ಕಟ್ಟಡದ ನೆಪದಲ್ಲಿ ಸರ್ಕಾರಿ ಜಮೀನು ಕಬಳಿಕೆ ನಡೆಯುತ್ತಿರುವುದರಿಂದ ಕಂದಾಯ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನ್ನಿ ತುರ್ತಾಗಿ ಕ್ರಮ ಕೈಗೊಂಡು ಸರ್ಕಾರಿ ಭೂಮಿ ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ ಅಧಿಕಾರಿಗಳು ಅಕ್ರಮವಾಗಿ ಒತ್ತುವರಿ ಮಾಡಿರುವವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಾಲ್ಲೂಕು ಭಜರಂಗದಳದ ಅಧ್ಯಕ್ಷ ಗಿರೀಶ್ ತಿಳಿಸಿದ್ದಾರೆ @publicnewskunigal